bad cholesterol ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೇಗೆ ಕಡಿಮೆ ಮಾಡಿಕೊಳ್ಳಬಹುದು ಗೊತ್ತಾ!
ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಆರೋಗ್ಯಕರ ಆಹಾರ, ವ್ಯಾಯಾಮ ಮತ್ತು ಒತ್ತಡ ನಿರ್ವಹಣೆ ಮಾಡಿ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಎಲ್ಡಿಎಲ್ ಎಂದು ಕರೆಯುತ್ತಾರೆ. ಇದು ರಕ್ತನಾಳಗಳಲ್ಲಿ ಕೊಬ್ಬಿನ ಶೇಖರಣೆಗೆ ಕಾರಣವಾಗಿ ಹೃದಯಾಘಾತ, ಸ್ಟ್ರೋಕ್ ಮತ್ತು ಇತರ ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸರಳ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಈ ಲೇಖನದ ಮೂಲಕ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸ್ವಚ್ಛಗೊಳಿಸುವ ಸುಲಭ ವಿಧಾನಗಳನ್ನು ತಿಳಿಸಿಕೊಡುತ್ತೇವೆ.
ಫೈಬರ್ನಿಂದ ಸಮೃದ್ಧವಾದ ಆಹಾರಗಳಾದ ಓಟ್ಸ್, ತರಕಾರಿಗಳು, ಬೀಜಗಳು, ಹಣ್ಣುಗಳು, ಧಾನ್ಯಗಳು ಫೈಬರ್ನಿಂದ ತುಂಬಿರುತ್ತವೆ. ಇವು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಒಮೆಗಾ-3 ಕೊಬ್ಬಿನಾಮ್ಲಗಳಾಗದ ಚಿಯಾ ಬೀಜಗಳು, ಫ್ಲಾಕ್ಸ್ಸೀಡ್ ,ಮೀನು ಮತ್ತು ವಾಲ್ನಟ್ಸ್ನಂತಹ ಆಹಾರಗಳು ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಿ, ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತವೆ. ಸಕ್ಕರೆ ಮತ್ತು ಟ್ರಾನ್ಸ್ ಫ್ಯಾಟ್ ಆಹಾರಗಳಾದ ಫಾಸ್ಟ್ ಫುಡ್ ಮತ್ತು ಸಿಹಿತಿಂಡಿಗಳು ಕೆಟ್ಟ ಕೊಲೆಸ್ಟ್ರಾಲ್ಅನ್ನು ಹೆಚ್ಚಿಸುತ್ತವೆ.
ಇವುಗಳನ್ನು ಕಡಿಮೆ ಮಾಡಿದರೇ ಉತ್ತಮ. ಹಣ್ಣು ಮತ್ತು ತರಕಾರಿಗಳಲ್ಲಿ ಕಿತ್ತಳೆ, ಬೀಟ್ರೋಟ್, ಎಲೆಕೋಸುಗಳು, ಕ್ಯಾರೆಟ್ ಆಂಟಿಆಕ್ಸಿಡೆಂಟ್ಗಳಿಂದ ಕೂಡಿದ್ದು, ರಕ್ತನಾಳಗಳನ್ನು ಸ್ವಚ್ಛವಾಗಿಡುತ್ತವೆ. ನಿತ್ಯ 30-40 ನಿಮಿಷಗಳ ಕಾಲ ವೇಗದ ನಡಿಗೆ, ಓಟ, ಸೈಕ್ಲಿಂಗ್ ಅಥವಾ ಈಜುವಂತಹ ವ್ಯಾಯಮಾಗಳು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಿ, ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತವೆ. ವಾರಕ್ಕೆ ಕನಿಷ್ಠ ಐದು ದಿನವಾದರೂ ವ್ಯಾಯಾಮ ಮಾಡಿದರೇ ಒಳ್ಳೆಯದು. ಅತಿಯಾದ ತೂಕವು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ.
ಆರೋಗ್ಯಕರ ಆಹಾರ ಮತ್ತು ವ್ಯಾಯಾಮದ ಮೂಲಕ ತೂಕವನ್ನು ನಿಯಂತ್ರಣದಲ್ಲಿಡಿ. ಸೊಂಟದ ಸುತ್ತಲಿನ ಕೊಬ್ಬು ಕಡಿಮೆ ಮಾಡುವುದು ಒಳ್ಳೆಯದು. ಧೂಮಪಾನವು ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತನಾಳಗಳಿಗೆ ಹಾನಿಯಾಗುವಂತೆ ಮಾಡುತ್ತದೆ. ಅತಿಯಾದ ಮದ್ಯಪಾನವು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಇವೆರಡನ್ನೂ ಸಂಪೂರ್ಣವಾಗಿ ಸೇವಿಸುವುದನ್ನು ನಿಲ್ಲಿಸಿ. ಒತ್ತಡವು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಬಹುದು. ಆದ್ದರಿಂದ ಯೋಗ, ಧ್ಯಾನ ಆಳವಾದ ಉಸಿರಾಟದ ವ್ಯಾಯಾಮಗಳು ಮತ್ತು ಒಳ್ಳೆಯ ನಿದ್ರೆಯ ಮೂಲಕ ಒತ್ತಡವನ್ನು ಕಡಿಮೆ ಮಾಡಿ.
ಗ್ರೀನ್ ಟೀಯಲ್ಲಿರುವ ಆಂಟಿಆಕ್ಸಿಡೆಂಟ್ಗಳು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಜೊತೆಗೆ 2-3 ಲೀಟರ್ ನೀರನ್ನು ಕುಡಿಯಿರಿ. ಇದು ದೇಹವನ್ನು ಸ್ವಚ್ಛವಾಗಿಡುತ್ತದೆ. ಕೊಲೆಸ್ಟ್ರಾಲ್ ಮಟ್ಟವನ್ನು ತಿಳಿಯಲು ವರ್ಷಕ್ಕೊಮ್ಮೆ ರಕ್ತ ಪರೀಕ್ಷೆ ಮಾಡಿಸಿ. ಕೆಲವೊಮ್ಮೆ, ಆಹಾರ ಮತ್ತು ವ್ಯಾಯಾಮದಿಂದ ಕೊಲೆಸ್ಟ್ರಾಲ್ ಕಡಿಮೆಯಾಗದಿದ್ದರೆ, ವೈದ್ಯರು ಸ್ಟಾಟಿನ್ನಂತಹ ಔಷಧಿಗಳನ್ನು ಸೂಚಿಸಬಹುದು. ಯಾವುದೇ ಔಷಧವನ್ನು ವೈದ್ಯರ ಸಲಹೆ ಇಲ್ಲದೇ ತೆಗೆದುಕೊಳ್ಳಬೇಡಿ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಆರೋಗ್ಯಕರ ಆಹಾರ, ನಿಯಮಿತ ವ್ಯಾಯಾಮ ಮತ್ತು ಒತ್ತಡ ನಿರ್ವಹಣೆ ಅತ್ಯಗತ್ಯ. ರಕ್ತನಾಳಗಳನ್ನು ಸ್ವಚ್ಛವಾಗಿಟ್ಟುಕೊಂಡು ಹೃದಯವನ್ನು ಆರೋಗ್ಯಕರವಾಗಿರಿಸಿ.
READ MORE: ಒಂದು ವೇಳೆ ದೇಹದಲ್ಲಿ ಯೂರಿಕ್ ಆಮ್ಲದ ಪ್ರಮಾಣ ಹೆಚ್ಚಾದರೆ ಆಗುವ ತೊಂದರೆಗಳು
ಮಹೀಂದ್ರಾ ಥಾರ್ಗೆ ಅದ್ಭುತ ಬೇಡಿಕೆ: ಕಳೆದ ತಿಂಗಳಲ್ಲಿ ಮಾರಾಟವಾದ ಸಂಖ್ಯೆಯು ಎಷ್ಟು ಗೊತ್ತೇ?
ಹೊಟ್ಟೆಯ ಜಂತುಹುಳಗಳನ್ನು ಕೊಲ್ಲುವ ನೈಸರ್ಗಿಕ ಆಹಾರಗಳು